Monday, November 29, 2010

ಡೊಳ್ಳು ಕುಣಿತ

ಡೊಳ್ಳು ಬೀರೇಶ್ವರ ದೇವರಿಗೆ ಅತಿ ಪ್ರಿಯವಾದ ವಾದ್ಯ. ಎಲ್ಲ ಬೀರೇಶ್ವರ ದೇವರ ಗುಡಿಗಳಲ್ಲಿ ಒಂದು ಡೊಳ್ಳನ್ನು ಕಟ್ಟಿರುತ್ತಾರೆ. ಕುರುಬ ಗೌಡ ಜನಾಂಗದ ಜನರು ಡೊಳ್ಳು ಕುಣಿತ ಮಾಡುತ್ತಾ ಬೀರೇಶ್ವರ  ದೇವರನು ಪೂಜಿಸುತ್ತಾರೆ. ಕುಣಿತದ ಜೊತೆ ಹಾಲುಮತ ಕುರುಬ ಪುರಾಣವನ್ನು ಹಾಡುತ್ತಾರೆ.  ಡೊಳ್ಳು ಕುಣಿತ ಮಾಡಲು ತುಂಬಾ ಶಕ್ತಿ ಮತ್ತು ದೈರ್ಯ ಬೇಕು, ತಮ್ಮ ಯುದ್ಧ ಕಲೆಗಳಲ್ಲಿ ಇದು ಒಂದು ಎಂದು ಕುರುಬರು ಬಾವಿಸುತಾರೆ , ಕುರುಬರು ಹಿಂದಿನ ಕಾಲದಲ್ಲಿ ಸೈನಿಕರು, ನಾಯಕರು ಆಗಿದ್ದರೆಂದು ಈ ನೃತ್ಯ ತೋರಿಸುತ್ತದೆ. ಕುರುಬ ವಂಶಸ್ತರು ಪಾರಂಪರಿಕವಾಗಿ ಈ ನೃತ್ಯವನ್ನು ತಲ ತಲಾಂತರದಿಂದ ಮಾಡಿಕೊಂಡು ಬಂದವರು. ಕರ್ನಾಟಕದಲ್ಲಿ ಯಹುದೇ ದೊಡ್ಡ ಕಾರ್ಯಕ್ರಮ ನಡೆದರೂ ಅಲ್ಲಿ ಡೊಳ್ಳು ಕುಣಿತ ಇದ್ದೆ ಇರುತ್ತದೆ

No comments:

Post a Comment